ಜಿಲ್ಲೆಯ ಐತಿಹಾಸಿಕ, ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ : ಕವಿತಾ ಎಸ್ ಮನ್ನಿಕೇರಿ

suddionenews
1 Min Read

ಚಿತ್ರದುರ್ಗ,(ಜೂನ್.09): ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಆಯ್ದ ಮೂರು ಐತಿಹಾಸಿಕ ಹಾಗೂ ಪಾರಂಪರಿಕ ತಾಣಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯುμï ಇಲಾಖೆ ಹಾಗೂ ಪುರಾತತ್ವ ಇಲಾಖೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಇಡೀ ದೇಶಾದ್ಯಂತ ಏಕಕಾಲದಲ್ಲಿ 75ನೇ ಅಮೃತ ಮಹೋತ್ಸವದ ಅಂಗವಾಗಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು,  ಜಿಲ್ಲೆಯ ಆಯ್ದ ಮೂರು ಐತಿಹಾಸಿಕ ಹಾಗೂ ಪಾರಂಪರಿಕಾ  ತಾಣಗಳಾದ ಚಿತ್ರದುರ್ಗದ ಕೋಟೆ ಆವರಣ ಮತ್ತು ಚಂದ್ರವಳ್ಳಿ ಹಾಗೂ ಹಿರಿಯೂರಿನ  ತೇರುಮಲ್ಲೇಶ್ವರ ದೇಗುಲದ ಆವರಣದಲ್ಲಿ ಇದೇ ಜೂನ್ 21ರಂದು ಬೆಳಿಗ್ಗೆ 7 ರಿಂದ 7.45 ರವರೆಗೆ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು ಎಂದರು.

ಆಯುಷ್ ಇಲಾಖಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಟಿ.ಶಿವಕುಮಾರ್ ಮಾತನಾಡಿ, ಯೋಗ ದಿನಾಚರಣೆಯನ್ನು ಚಿತ್ರದುರ್ಗ ನಗರದ ಪ್ರಮುಖ ಬೀದಿಗಳಲ್ಲಿ ಜೂನ್ 19 ರಂದು ಯೋಗ ಜಾಥಾವನ್ನು ನಡೆಸಲಾಗುವುದು. ಎನ್‍ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ವಿವಿಧ ಯೋಗ ತರಬೇತಿ ಸಂಸ್ಥೆಗಳು ಹಾಗೂ ಆಸಕ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್.ರಂಗನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಿರೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು,  ಹಾಗೂ ವಿವಿಧ ಯೋಗ ಸಂಘಟನೆಯ ಪದಾಧಿಕಾರಿಗಳು, ಯೋಗಾಸಕ್ತರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *