Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಯೋಗ ದಿನಾಚರಣೆ ಆಯೋಜನೆ : ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್

---Advertisement---

ಚಿತ್ರದುರ್ಗ. ಜೂ.20: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು, ಇದು ದೈಹಿಕ ಮತ್ತು ಮಾನಸಿಕ ಯೋಗಕ್ಷೇಮ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಮಹತ್ವ ಗುರುತಿಸಿ, ಪ್ರತಿ ವರ್ಷ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಈ ಮಹತ್ವದ ಉಪಕ್ರಮದಲ್ಲಿ ಜಿಲ್ಲೆಯು ಸಕ್ರಿಯವಾಗಿ ಭಾಗವಹಿಸುವುದು ಅತ್ಯಗತ್ಯವಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಂಡು ಯಶಸ್ವಿಗೊಳಿಸಲು ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಜಲ ಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಫಲಾನುಭವಿಗಳ ಸಭೆ ಆಯೋಜಿಸುವುದು ಹಾಗೂ ಮಹಾತ್ಮಾಗಾಂಧಿ ನರೇಗಾ ಯೋಜನೆ ಕೂಲಿ ಕಾರ್ಮಿಕರು, ಸಾರ್ವಜನಿಕರು  ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...