Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಯೋಗೀಶ್ ಸಹ್ಯಾದ್ರಿ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ನಗರದ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಯೋಗೀಶ್ ಸಹ್ಯಾದ್ರಿ ಇವರು ಚಿತ್ರದುರ್ಗ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ.

ಕನಕ ಬ್ಯಾಂಕ್ ಅಧ್ಯಕ್ಷರಾದ ಲೋಕೇಶ್ ಕುಮಾರ್ ಹೆಚ್.ಎನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಯೋಗೀಶ್ ಸಹ್ಯಾದ್ರಿ ಅವರು ಆಯ್ಕೆ ಮಾಡಲಾಯಿತು. ಇವರಿಗೆ ಕನಕ ಬ್ಯಾಂಕ್ ನ ಸರ್ವ ಸದಸ್ಯರು ಹಾಗೂ ಪದಾಧಿಕಾರಿಗಳು ಶುಭ ಕೋರಿದ್ದಾರೆ. ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಯೋಗೀಶ್ ಸಹ್ಯಾದ್ರಿಯವರು, ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಾಗೂ ಚಿತ್ರದುರ್ಗ ತಾಲ್ಲೂಕು ಕುರುಬ ಸಂಘದ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ನಿರ್ದೇಶಕರಾಗಿ ಆಯ್ಕೆ ಆದ ಸಂದರ್ಭದಲ್ಲಿ ಅಧ್ಯಕ್ಷರಾದ ಹೆಚ್. ಎನ್. ಲೋಕೇಶ್ ಕುಮಾರ್, ಸಂಸ್ಥಾಪಕ ಅಧ್ಯಕ್ಷ ಕೆ.ಬಿ. ರಾಮಪ್ಪ, ಉಪಾಧ್ಯಕ್ಷ ಓಂಕಾರಪ್ಪ, ನಿರ್ದೇಶಕರುಗಳಾದ ಪುಷ್ಪರಾಜ್, ದೊಡ್ಡಲಿಂಗಪ್ಪ, ಕೃಷ್ಣಪ್ಪ, ಸೋಮಶೇಖರ್, ನೀಲಗಿರಿಯಪ್ಪ, ನರಸಿಂಹ ಮೂರ್ತಿ, ಎಂ.ಎಸ್. ಬಸವರಾಜ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment