Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯೋಗೀಶ್ ಸಹ್ಯಾದ್ರಿ ಅವರಿಗೆ “ವರ್ಷದ ಅತ್ಯುತ್ತಮ ಶಿಕ್ಷಕ – 2024” ಪ್ರಶಸ್ತಿ ಪ್ರದಾನ

---Advertisement---

 

ಸುದ್ದಿಒನ್, ಚಿತ್ರದುರ್ಗ ಸೆ. 16 : ಉಪನ್ಯಾಸಕ ಹಾಗೂ ಲೇಖಕ ಯೋಗೀಶ್ ಸಹ್ಯಾದ್ರಿ ಅವರಿಗೆ ರೋಟರಿ ಕ್ಲಬ್ ಚಿನ್ಮೂಲಾದ್ರಿ ಚಿತ್ರದುರ್ಗ ವತಿಯಿಂದ ಶುಕ್ರವಾರದಂದು ಶಿಕ್ಷಕ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ “ವರ್ಷದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಯೋಗೀಶ್ ಸಹ್ಯಾದ್ರಿ ಅವರು, ಯಾವುದೇ ಪ್ರಶಸ್ತಿ, ಬಿರುದು, ಸನ್ಮಾನಗಳು ವ್ಯಕ್ತಿಯ ಜವಾಬ್ದಾರಿಯನ್ನು ಹೆಚ್ಚು ಮಾಡುತ್ತವೆ ಮತ್ತು ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಲು ಪ್ರೇರೇಪಿಸುತ್ತವೆ ಎಂದು ಹೇಳುತ್ತಾ ಇಂದು ನನಗೆ ನೀಡಿದ ಪುರಸ್ಕಾರ ನನಗೆ ವಿದ್ಯೆ ಕಲಿಸಿದ ಗುರುಗಳಿಗೆ ಸಮರ್ಪಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರೊ| ಪಿ.ಹೆಚ್.ಎಫ್ ಎಂ.ಕೆ. ರವೀಂದ್ರ ಅವರು ಯಾವುದೇ ಒಂದು ದೇಶ ಅಭಿವೃದ್ಧಿಯತ್ತ ಸಾಗಬೇಕಾದರೆ ಅತ್ಯುತ್ತಮ ಶಿಕ್ಷಣ ಹಾಗು ಶಿಕ್ಷಕರ ಕಾರ್ಯ ಮಹತ್ವದ್ದಾಗಿದೆ. ಜಿಲ್ಲೆಯ ಗ್ರಾಮೀಣ ಹಾಗು ಸ್ಲಂ ಪ್ರದೇಶದ ವಿದ್ಯಾರ್ಥಿಗಳಿಗೆ ಸಹ್ಯಾದ್ರಿ ಅವರ ಉಚಿತ ಇಂಗ್ಲಿಷ್ ತರಬೇತಿಯ ನಿಸ್ವಾರ್ಥ ಸೇವೆ ಮತ್ತು ಮಕ್ಕಳ ಸಾಹಿತ್ಯ ಪರಿಷತ್ ನ ಸೇವೆ ಮುಂದುವರೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ ರೊ|| ಮಂಜುನಾಥ್ ಭಾಗವತ್, ಯೋಗೀಶ್ ಸಹ್ಯಾದ್ರಿ ಅವರು ತಮ್ಮ ಎಜುಕೇಷನ್ ಟ್ರಸ್ಟ್ ಮೂಲಕ ಜಿಲ್ಲೆಯ ಸರ್ಕಾರಿ ಶಾಲೆ-ಕಾಲೇಜುಗಳು, ಸ್ಲಂ ಪ್ರದೇಶದ ಹಾಗೂ ಹಾಸ್ಟೆಲ್ ಮಕ್ಕಳಿಗೆ ಉಚಿತವಾಗಿ ಇಂಗ್ಲಿಷ್ ಕಲಿಸಿಕೊಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೃತಿಗಳನ್ನು ರಚಿಸಿರುವ ಇವರ ಸಾಧನೆ ಹಾಗೂ ಸಾಮಾಜಿಕ, ಶೈಕ್ಷಣಿಕ ಕೊಡುಗೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ. ಕೃಷ್ಣಮೂರ್ತಿ, ತಾಲೂಕು ಕಂದಾಯಾಧಿಕಾರಿ ಪ್ರಾಣೇಶ್, ನಿವೃತ್ತ ಪೊಲೀಸ್ ಎ.ಎಸ್.ಐ ಪ್ರಾಣೇಶ್, ರೋಟರಿ ಕ್ಲಬ್ ಉಪಾಧ್ಯಕ್ಷ ರೊ| ಗುರುಮೂರ್ತಿ, ಮಕ್ಕಳ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಕುರುಬ ಸಮಾಜದ ಮುಖಂಡರುಗಳಾದ ಮೃತ್ಯುಂಜಯ, ಮಾಳೇಶ್, ಸುರೇಶ್ ಉಗ್ರಾಣ, ಉಮೇಶ್, ಮಹೇಶ್, ಮಂಜುನಾಥ್ ಹಾಗು ಸಹ್ಯಾದ್ರಿ ಅವರ ವಿದ್ಯಾರ್ಥಿಗಳು ಹಾಗು ಅಭಿಮಾನಿಗಳು ಮತ್ತು ರೋಟರಿ ಕ್ಲಬ್ ಸದಸ್ಯರಾದ ಅರುಣ್ ಕುಮಾರ್, ಶ್ರೀನಿವಾಸ್ ಮಳಲಿ, ವೀರಣ್ಣ ಇನ್ನಿತರರು ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment