Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೋಗಿ ಸರ್ಕಾರದ ಮೇಲೆ ತೂಗುಗತ್ತಿ : ಎನ್ ಕೌಂಟರ್ ವಿವರ ಕೇಳಿದ ಸುಪ್ರೀಂ ಕೋರ್ಟ್..!

Facebook
Twitter
Telegram
WhatsApp

 

ಉತ್ತರಪ್ರದೇಶ: ಸುಪ್ರೀಂ ಕೋರ್ಟ್ ಇದೀಗ ಯೋಗಿ ಆದಿತ್ಯ ನಾಥ್ ಸರ್ಕಾರಕ್ಕೆ ಕೆಲವೊಂದಿಷ್ಟು ವಿವರಣೆ‌ ಕೇಳಿದೆ. ಎನ್ಕೌಂಟರ್ ವಿವರನ್ನು ನೀಡಲು ಸೂಚನೆ ನೀಡಲಾಗಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಗ್ಯಾಂಗ್ ಸ್ಟಾರ್ ಹಾಗೂ ರಾಜಕಾರಣಿ‌ ಅತಿಕ್ ಹಾಗೂ ಆತನ ಸಹೋದರ ಅಶ್ರಪ್ ಅವರ ಪೊಲೀಸ್ ಕಸ್ಟಡಿ ಸಾವಿನ ಬಗ್ಗೆ ಇದೀಗ ಸುಪ್ರೀಂ ಕೋರ್ಟ್ ಕೇಸನ್ನು ಕೈಗೆತ್ತಿಕೊಂಡಿದೆ.

ಹೀಗಾಗಿ 2017ರಿಂದ ರಾಜ್ಯದಲ್ಲಿ ನಡೆದ 183 ಎನ್ಕೌಂಟರ್ ಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಯುಪಿ ಸರ್ಕಾರಕ್ಕೆ ತಿಳಿಸಿದೆ. ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಹೆಚ್ಚುತ್ತಿರುವ ಪೊಲೀಸ್ ಎನ್‌ಕೌಂಟರ್‌ಗಳು ಮತ್ತು ಕಸ್ಟಡಿ ಸಾವಿನ ಪ್ರಕರಣಗಳ ಬಗ್ಗೆ ನ್ಯಾಯಮೂರ್ತಿ ಎಸ್‌ಆರ್ ಭಟ್ ನೇತೃತ್ವದ ಪೀಠವು ಕಳವಳ ವ್ಯಕ್ತಪಡಿಸಿದೆ.

ಜೈಲಿನ ಗೋಡೆಯೊಳಗೆ ಇಂತಹ ಘಟನೆಗಳು ಯಾಕೆ ಸಂಭವಿಸುತ್ತವೆ. ಆರೋಪಿಯ ವಿಚಾತಣೆಯ ಹಂತ ಮತ್ತು ಮಾರ್ಗಸೂಚಿಗಳು ಏನು..? ತನಿಖೆಯ ಸ್ಥಿತಿಗತಿಗಳೇನು..? ಯಾವ ಆರೋಪದ ಮೇಲೆ‌ ತನಿಖೆ‌ ನಡೆಸಲಾಗಿತ್ತು..? ಈ ಬೆಳವಣಿಗೆಗಳು ಒಂದು ರಾಜ್ಯವನ್ನು ಮೀರಿ ಯಾಕೆ ವಿವರಿಸುತ್ತಿವೆ..? ಹೀಗೆ ಹಲವು ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ಇದಕ್ಕೆ ಈಗ ಯೋಗಿ ಸರ್ಕಾರ ದಾಖಲೆಯ ಸಮೇತ ಉತ್ತರ ನೀಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!