ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ನೀಡಿದೆ. ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನೆಸಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಸಿಬಿಐ ಗೆ ನೋಟಿಸ್ ನೀಡಿದೆ.
ಪ್ರಕರಣದ ಹಿನ್ನಲೆ:
2016 ರ ಜೂನ್ 15 ರಂದು ಧಾರವಾಡದ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದರಲ್ಲಿ ವಿನಯ್ ಕುಲಕರ್ಣಿ ಕೈವಾಡ ಆರೋಪಿಸಿ 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










