ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮೀಷನ್‌ ರಾಜ್ಯʼ ಮಾಡಿದ್ದೀರಿ : ಹೆಚ್.ಡಿ. ಕುಮಾರಸ್ವಾಮಿ

suddionenews
2 Min Read

ಬೆಂಗಳೂರು: ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ ಸಾಕ್ಷಿ ಸಮೇತ ತಗಲಾಕಿಕೊಂಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಅವರಿಗೆ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ @AmitShah ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ @BJP4Karnataka ಸರಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ.

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್‌ ಶಾ ಅವರೇ!!

ಅಮಿತ್ ಶಾ ಅವರೇ ಈಗ ಹೇಳಿ..
ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?

ನಿಮ್ಮ ಡಬಲ್ ಎಂಜಿನ್ @BJP4Karnataka ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮೀಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ @BJP4Karnataka ಪಕ್ಷದ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?

ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮೀಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?

ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ;
ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮೀಷನ್ ಕೊಚ್ಚೆಯಲ್ಲಿ ಉರುಳಾಡಿದ್ದ @BJP4Karnataka ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ ಎಂದು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *