Connect with us

Hi, what are you looking for?

ಪ್ರಮುಖ ಸುದ್ದಿ

ವಾಟ್ಸಾಪ್ ನಲ್ಲಿ ತಿಳಿಸಿದರೂ ಮೂಲಭೂತ ಸಮಸ್ಯೆ ನಿವಾರಣೆ ಮಾಡುತ್ತೇವೆ: ಮೇಯರ್ ಎಸ್.ಟಿ. ವೀರೇಶ್

ದಾವಣಗೆರೆ:  ವಾಟ್ಸ್ ಆ್ಯಪ್ ಮೂಲಕ ಜನರು ಇನ್ನು ಮಂದೆ ತಮ್ಮ ಮೂಲಭೂತ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದ್ದು, ಸಮಸ್ಯೆಗಳ ನಿವಾರಣೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಪಾಲಿಕೆ ನೂತನ ಮೇಯರ್ ಎಸ್.ಟಿ.ವೀರೇಶ್ ಭರವಸೆ ನೀಡಿದರು.

ಬುಧವಾರ ನೂತನ ಮೇಯರ್ ಆಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೂಲಭೂತ ಸಮಸ್ಯೆಯ ಬಗ್ಗೆ ನಮ್ಮ ಗಮನಕ್ಕೆ ತಂದರೆ ಕೂಡಲೇ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.

ಜನ ಪಾಲಿಕೆಯಿಂದ ನಿರೀಕ್ಷೆ ಮಾಡುವುದು ಸ್ವಚ್ಛತೆ, ಕುಡಿಯುವ ನೀರು, ವಿದ್ಯುದ್ದೀಪ ವ್ಯವಸ್ಥೆ ಇದನ್ನು ಎಲ್ಲರಿಗೂ ಪ್ರಾಮಾಣಿಕತೆಯಿಂದ ತಲುಪಿಸವುದು ನಮ್ಮ ಜವಾಬ್ದಾರಿ, ಹೊಸದಾಗಿ ಬಿಡುಗಡೆ ಮಾಡುವ ವಾಟ್ಸ್‍ ಆ್ಯಪ್ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನಮ್ಮ ಗನಮಕ್ಕೆ ತಂದರೆ ಕೂಡಲೇ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

ನಗರದಲ್ಲಿ ವ್ಯಾಪಕವಾಗಿರುವ ಹಂದಿಗಳ ನಿರ್ಮೂಲನೆ ಜತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹಂದಿ ಸ್ಥಳಾಂತರ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಇದನ್ನು ಬಗೆಹರಿಸಿಕೊಂಡು ಆದಷ್ಟು ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಕ್ಷದ ವರಿಷ್ಟರ ತೀರ್ಮಾನದಂತೆ ಸಾಮಾನ್ಯ ಕಾರ್ಯಕರ್ತನಾಗಿದ್ದ ನಾನು ಮೇಯರ್ ಆಗಿ ಆಯ್ಕೆ ಆಗಿದ್ದೇನೆ. ಇದಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ್ ಮತ್ತು ಕೋರ್ ಕಮಿಟಿಯ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ.
ಸಾಮಾನ್ಯ ಕಾರ್ಯಕರ್ತನಿಗೆ ಇಷ್ಟೊಂದು ದೊಡ್ಡ ಜವಾಬ್ದಾರಿ ವಹಿಸಿರುವುದು ನಮ್ಮ ಪಕ್ಷದ ವಿಶೇಷ. ಸಾಮಾನ್ಯ ಕಾರ್ಯಕರ್ತನೂ ಕೂಡ ಪಕ್ಷದಲ್ಲಿ ಉನ್ನತ ಹುದ್ದೆ ಪಡೆಯಲು ಸಾಧ್ಯ ಎನ್ನುವುದನ್ನು ನಿರೂಪಿಸುವುದು ನಮ್ಮ ಪಕ್ಷದಲ್ಲಿ ಮಾತ್ರ ಸಾಧ್ಯ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, ಸುದ್ದಿಒನ್, (ಏ.12) : ಯುವಕನೊಬ್ಬ ಚಿರತೆಯಿಂದ ತಪ್ಪಿಸಿಕೊಂಡು ಬಚಾವ್ ಆದ ಘಟನೆ ನಗರದ ಕೋಟೆಯ ಕರವತ್ತಿ ಬಳಿ ಇರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ ನಡೆದಿದೆ. ನಗರದ...

ಪ್ರಮುಖ ಸುದ್ದಿ

ಆ ಕಡೆ ಸತ್ಯ ಕಾರ್ತೀಕ್ ಮೇಲೆ ಅಗಾಧ ಪ್ರೀತಿ ಬೆಳೆಸಿಕೊಳ್ತಾ ಇದ್ದಾಳೆ…ಇತ್ತ ಕಾರ್ತೀಕ್ ದಿವ್ಯಳ ಮದುವೆಗೆ ತಯಾರಿ ನಡೆಸುತ್ತಿದ್ದಾನೆ…ಇದೆಲ್ಲದರ ನಡುವೆ ಇತ್ತೀಚೆಗೆ ಅಮೂಲ್ ಬೇಬಿಯ ನಡವಳಿಕೆ ಸತ್ಯಳಿಗೆ ಇನ್ನಷ್ಟು ಪ್ರೀತಿ ಹುಟ್ಟುವಂತೆ ಮಾಡಿದೆ....

ಪ್ರಮುಖ ಸುದ್ದಿ

ಇನ್ನೇನು ಕೆಲವೇ ದಿನಗಳಲ್ಲಿ ಕೃಷ್ಣ ಟಾಕೀಸ್ ಸಿನಿಮಾ ಥಿಯೇಟರ್ ಗೆ ಬರಲಿದೆ. ಇದೇ ತಿಂಗಳ 16 ರಂದು ತೆರೆಗೆ ಬರೋದಕ್ಕೆ ಸಜ್ಜಾಗಿರುವ ಕೃಷ್ಣ ಟಾಕೀಸ್, ತನ್ನ ಟೈಟಲ್ ಮೂಲಕವೇ ಸದ್ದು ಮಾಡಿತ್ತು. ಅದಾದ...

ಪ್ರಮುಖ ಸುದ್ದಿ

ದಾವಣಗೆರೆ : ಜಿಲ್ಲೆಯಾದ್ಯಂತ ಭತ್ತದ ಬೆಳೆಗೆ ದುಂಡಾಣು ಅಂಗಮಾರಿ ರೋಗ ಕಂಡುಬಂದಿದ್ದು, ಇದರ ನಿರ್ವಹಣೆಗೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ. ಭತ್ತದ ಬೆಳೆಯಲ್ಲಿ ಬೆಳವಣಿಗೆಯಿಂದ ತೆನೆ ಒಡೆಯುವ ಹಂತದವರೆಗೆ ತಲುಪಿ ಅಲ್ಲಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಉಮೇದುವಾರಿಕೆ ಹಿಂತೆಗೆದುಕೊಂಡ ನಂತರ ಅಂತಿಮವಾಗಿ 9 ಅಭ್ಯರ್ಥಿಗಳು ಸ್ಪರ್ಧೆಯಲಿದ್ದಾರೆ. ನ.ಕೆಂಚವೀರಪ್ಪ, ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ,...

ಪ್ರಮುಖ ಸುದ್ದಿ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ನ ಸೋಂಕಿತ ಪ್ರಕರಣಗಳ ಸಂಖ್ಯೆ ಹಾವು ಏಣಿ ಆಟದಂತಾಗಿದೆ. ಆದರೆ ಸೋಮವಾರದ ಗುಣಮುಖಗೊಂಡವರು ಹೆಚ್ಚಾಗಿದ್ದು, ಸಮಾಧಾನ ತಂದಿದೆ. ಸೋಮವಾರದ ವರದಿಯಲ್ಲಿ 11 ಜನರಿಗೆ ಸೋಂಕು ದೃಢಪಟ್ಟಿದ್ದು,...

ಪ್ರಮುಖ ಸುದ್ದಿ

ಚಿತ್ರದುರ್ಗ :  ಕೋವಿಡ್-19 ಹಿನ್ನಲೆಯಲ್ಲಿ ಧಾರ್ಮಿಕ ಹಬ್ಬಗಳಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಜಾತ್ರೆಗಳು, ಮೇಳಗಳಲ್ಲಿ ಗುಂಪು ಸೇರದಂತೆ, ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶ ಇತ್ಯಾದಿ ಸ್ಥಳಗಳಲ್ಲಿ ಸಾರ್ವಜನಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಚಳ್ಳಕೆರೆ ತಾಲ್ಲೂಕಿನ ತಳುಕು ಹೋಬಳಿಯ ರೇಣುಕಾಪುರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಏ. 17ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಇದರ ಪೂರ್ವಭಾವಿಯಾಗಿ ಗ್ರಾಮದಲ್ಲಿನ ಕುಂದುಕೊರತೆಗಳ ಬಗ್ಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಲಾಗಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಯನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್...

error: Content is protected !!