Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವಸಮುದಾಯ ನಮ್ಮ ಸಂವಿಧಾನದ ಮೌಲ್ಯಗಳನ್ನು ಹಿಡಿದಿಟ್ಟುಕೊಳ್ಳಬೇಕು : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.26 : ಯುವಸಮುದಾಯ ನಮ್ಮ ಸಂವಿಧಾನದ ಮೌಲ್ಯಗಳನ್ನು ಹಿಡಿದಿಟ್ಟುಕೊಳ್ಳಬೇಕು ಮತ್ತು ನಮ್ಮ ದೇಶದ ಪ್ರಗತಿಗೆ ವಿಶಿಷ್ಟ ಕೊಡುಗೆ ನೀಡಬೇಕು. ಯುವಕರು ನಮ್ಮ ದೇಶದ ಶ್ರೀಮಂತ ಪರಂಪರೆಯನ್ನು ಮರೆಯಬಾರದು ಮತ್ತು ಭಾರತ ರಾಷ್ಟ್ರದ ಭಾಗವಾಗಿರುವುದಕ್ಕೆ ಹೆಮ್ಮೆ ಪಡಬೇಕೆಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ನಗರದ ಹೊರಹೊಲಯದಲ್ಲಿರುವ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದ ಆವರಣದಲ್ಲಿರುವ ಎಸ್.ಜೆ.ಎಸ್ ಸಮೂಹ ಸಂಸ್ಥೆಗಳಿದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೆರಿಸಿ ಮಾತನಾಡಿದ ಶ್ರೀಗಳು, ನಮ್ಮ ದೇಶದ ಸರ್ವಾಂಗೀಣ  ಪ್ರಗತಿಗಾಗಿ ಕೆಲಸ ಮಾಡುವಾಗ, ನಮ್ಮ ರಾಷ್ಟ್ರಕ್ಕಾಗಿ ತ್ಯಾಗ ಮಾಡಿದ ಅನೇಕ ನಾಯಕರನ್ನು ನೆನಪಿಸಿಕೊಂಡು ಮುಂದಿನ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಬೇಕು. ನಮ್ಮ ರಾಷ್ಟ್ರವನ್ನು ರಕ್ಷಿಸಲು ಮತ್ತು ಹೆಮ್ಮೆಪಡುವಂತೆ ಮಾಡಲು ಸಂವಿಧಾನ ಆಶಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞೆ ಮಾಡಬೇಕು.

ಇಂದು ಪ್ರತಿಯೊಬ್ಬ ಯುವಕರು ತಮ್ಮ ಹಕ್ಕುಗಳು ಏನೆಂದು ತಿಳಿಯಲು ಬಯಸುತ್ತಾರೆ, ಸಂವಿಧಾನ ಅಧ್ಯಯನ ಮಾಡಿದರೆ, ಕರ್ತವ್ಯಗಳನ್ನು ನಿರ್ವಹಿಸಲು ಕಲಿತು ಸ್ವಯಂಚಾಲಿತವಾಗಿ ತನ್ನ ಹಕ್ಕುಗಳನ್ನು ಚಲಾಯಿಸುತ್ತಾರೆ.

ದೇಶಕ್ಕೆ ಸಂವಿಧಾನ ಸಮರ್ಪಣೆ ಹಾಗೂ ಗಣರಾಜ್ಯೋತ್ಸವ ದಿನವಾದ ಜ.26 ದೇಶದ ಜನರಿಗೆ ನಿಜವಾದ ಸಮಾನತೆ ಸಿಕ್ಕ ದಿನವಾಗಿದ್ದು, ಸಂವಿಧಾನದ ಮೂಲಕ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳ ನೀಡುವ ಮೂಲಕ ಭದ್ರ ಬುನಾದಿ ಹಾಕಿದ್ದಾರೆ.

ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಯ ಅವಕಾಶವನ್ನು ಒದಗಿಸುವುದರೊಂದಿಗೆ, ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನು ಹೊಂದಿದೆ. ಆ ಮೂಲಕ ನಾಗರೀಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ  ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಈ ಆಶಯಗಳನ್ನು ಸಾಕಾರಗೊಳಿಸಲು ಪ್ರತಿಯೊಬ್ಬರು ಶ್ರಮಿಸಬೇಕು.

ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ತಂಡದ ಸದಸ್ಯರ ದೂರದೃಷ್ಟಿಯ ಪರಿಣಾಮ ನಮ್ಮ ಅದ್ಭುತ ಸಂವಿಧಾನದಡಿಯಲ್ಲಿ  ಸಮಬಾಳು ಸಮಪಾಲಿನ ದಿನಗಳನ್ನು ಕಾದು ನೋಡುವ ಆಶಭಾವನೆ ಇದೆ. ಸಂವಿಧಾನ ಶಿಲ್ಪಿ ಡಾ ಬಾಬಾ ಸಹೇಬ್ ಅಂಬೇಡ್ಕರ್ ಅವರ ಪ್ರಗತಿಯ ದಾರಿಯಲ್ಲಿ ನಡೆಯುವುದಕ್ಕೆ ದಾರಿದೀಪವಾಗಿದ್ದಾರೆ.

ಯುಗಯುಗಾಂತರಗಳಿಂದ ಮಾನವೀಯತೆ ನೆಲೆಸಿರುವ ರಾಷ್ಟ್ರ ನಮ್ಮ ಭಾರತ. ಇದು ವಿಭಿನ್ನ ಧರ್ಮ, ಸಮಾಜ, ಸಂಸ್ಕೃತಿ ಮತ್ತು ಭಾಷೆಗಳಿಂದ ಆಶೀರ್ವದಿಸಲ್ಪಟ್ಟಿರುವ ದೇಶವಾಗಿದೆ, ಎಲ್ಲವೂ ಪರಸ್ಪರ ಸೌಹಾರ್ದತೆಯಿಂದ ಪರಸ್ಪರ ಸಂಬಂಧ ಹೊಂದಿದೆ. ಇಡೀ ಜಗತ್ತಿಗೆ ವಿವಿಧತೆಯಲ್ಲಿ ಏಕತೆ ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ನಾವು ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬೇಕು ಮತ್ತು ನಮ್ಮ ರಾಷ್ಟ್ರೀಯ ಏಕತೆಯ ಬಲವರ್ಧನೆ ಮತ್ತು ಐಕ್ಯಮತ್ಯಕ್ಕಾಗಿ ನಾವು ಶ್ರಮಿಸಬೇಕು ಹೇಳಿದರು.

ಸಮಾರಂಭದಲ್ಲಿ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಶ್ರೀಧರ, ಶಾರದ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಹನುಮಂತಪ್ಪ, ಸಿದ್ಧರಾಮೇಶ್ವರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಜಯಮ್ಮ ಎಸ್.ಜೆ.ಎಸ್ ಆಂಗ್ಲ ಮಾದ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!