Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀಟ್ ಅಕ್ರಮ ತನಿಖೆ ನಡೆಸಿ : ಯುವ ಕಾಂಗ್ರೆಸ್ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 21 :
ನೀಟ್ ಪರೀಕ್ಷೆಯ ಆಕ್ರಮಗಳ ಕುರಿತು ಸಿಬಿಐ / ಎಸ್‍ಐಟಿ ಅಥವಾ ನ್ಯಾಯಾಂಗ ಮೇಲ್ವಿಚಾರಣೆಯ ತನಿಖೆ ನಡೆಸಬೇಕು. ಸಂಬಂಧಪಟ್ಟ ಕೇಂದ್ರ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾನೂನು ಘಟಕದ ವತಿಯಿಂದ ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಲಾಯಿತು.

ನೀಟ್ ಪರೀಕ್ಷೆಯ ಅಕ್ರಮಗಳು, ವಿದ್ಯಾರ್ಥಿಗಳ ಭವಿಷ್ಯ ಹಾನಿ ಹಾಗೂ ಕೇಂದ್ರ ಶಿಕ್ಷಣ ಇಲಾಖೆಯ ವೈಫಲ್ಯದಿಂದಾಗಿ ದೇಶದಾದ್ಯಂತ ನಡೆದ ನೀಟ್ ಪರೀಕ್ಷೆಯ ಅಕ್ರಮಗಳು, ಪೇಪರ್ ಲೀಕ್, ಅಸಮಾನ ಪರೀಕ್ಷಾ ವ್ಯವಸ್ಥೆ ಹಾಗೂ ಆಡಳಿತಾತ್ಮಕ ವೈಫಲ್ಯಗಳಿಂದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ವಿದ್ಯಾರ್ಥಿಗಳು ಹಲವು ವರ್ಷಗಳ ಪರಿಶ್ರಮದಿಂದ ಪರೀಕ್ಷೆಗೆ ಸಿದ್ಧರಾಗಿದ್ದರೂ, ಕೇಂದ್ರ ಮಟ್ಟದ ನಿರ್ಲಕ್ಷ್ಯ ಮತ್ತು ಅವ್ಯವಸ್ಥೆಯಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ನಂಬಿಕೆ ಕುಸಿದಿದೆ ಎಂದು ದೂರಿದರು.

ನೀಟ್ ಪರೀಕ್ಷೆಯ ಆಕ್ರಮಗಳ ಕುರಿತು ಸಿಬಿಐ / ಎಸ್‍ಐಟಿ ಅಥವಾ ನ್ಯಾಯಾಂಗ ಮೇಲ್ವಿಚಾರಣೆಯ ತನಿಖೆ ನಡೆಸಬೇಕು. ಸಂಬಂಧಪಟ್ಟ ಕೇಂದ್ರ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಮರುಪರಿಶೀಲಿಸಿ ಅಗತ್ಯವಿದ್ದಲ್ಲಿ ರದ್ದುಗೊಳಿಸಬೇಕು ರಾಜ್ಯ ಸರ್ಕಾರಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುವ ಅಧಿಕಾರವನ್ನು ಮರು ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಾಂಕ್ ಓ,  ಜಿಲ್ಲಾ ಉಪಾಧ್ಯಕ್ಷ ಮೈಲಾರ ಎಂ. ಕೋಟಿ.,ಗುರುಮೂರ್ತಿ ಎಂ., ಶಿವಕುಮಾರ್ ಎಸ್., ಸಂದೀಪ್ ರಾಜ್ ಪಾಡಿಗಾಟ್ಟೆ, ಕನಕ ಆಂಜನೇಯ, ಲಕ್ಷ್ಮಿಪತಿ ಎಸ್., ಜಿ. ನಾಗರಾಜ್ ಐ., ನಾಗರಾಜ್ ಜಿ,. ಲಕ್ಷ್ಮಿಕಾಂತ ಡಿ, ಇಸ್ಮಾಯಿಲ್ ಜಾಬಿಹುಲ್ಲ, ನೂರಉಲ್ಲನವೀನ್ಕುಮಾರ್ ಡಿ. ಒ. ಮುಂತಾದವರು ಬಾಗಿಯಾಗಿದ್ದರು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now