Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಂತಯುತವಾಗಿ ದಸರಾ ಮತ್ತು ಈದ್‍ಮಿಲಾದ್ ಹಬ್ಬ ಆಚರಿಸಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

Facebook
Twitter
Telegram
WhatsApp

ದಾವಣಗೆರೆ ಅ.03 :  ಸಾರ್ವಜನಿಕವಾಗಿ ಆರ್ಯುಪೂಜೆ-ವಿಜಯದಶಮಿ ಮತ್ತು ಈದ್‍ಮಿಲಾದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಸೌಹಾರ್ಧತೆ ಕಾಪಾಡಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯವಾದದ್ದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಜಯದಶಮಿ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ‘ನಾಗರಿಕ ಸೌಹಾರ್ದ ಸಮನ್ವಯ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಯುಧ ಪೂಜೆ ವಿಜಯದಶಮಿ ಮತ್ತು ಈದ್‍ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ನಡೆಸಲಾಗುವ ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಆಯಾ ಸಮುದಾಯದ ಮುಖಂಡರು ಯುವಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ನಗರವು ಸ್ಮಾರ್ಟ್‍ಸಿಟಿ ಆಗುತ್ತಿದ್ದು, ಜನರು ಕೂಡ ಸ್ಮಾರ್ಟ್ ಆಗುವ ಮೂಲಕ ಉತ್ತಮ ಅತ್ಯುತ್ತಮ ಸೌಹಾರ್ದಯುತ ಸಮಾಜ ನಿರ್ಮಾಣ ಮಾಡೋಣ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಮಾತನಾಡಿ, ಜಿಲ್ಲೆಯಾದ್ಯಂತ ಹಿಂದಿನಿಂದಲೂ ಶಾಂತಿ ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಮುಂದೆಯೂ ಇದೆ ರೀತಿ ಹಬ್ಬಗಳನ್ನು ಆಚರಿಸಲು ಸಹಕಾರ ನೀಡಬೇಕು. ವಿವಿಧ ಧರ್ಮಗಳ ಮುಖಂಡರು ಹಬ್ಬದ ದಿನಗಳಲ್ಲಿ ಪರಸ್ಪರ ಸಿಹಿತಿನಿಸಿ ಹಬ್ಬವನ್ನು ಆಚರಿಸುವುದು ಉತ್ತಮ ಬೆಳವಣಿಗೆಯಾಗಿದೆ. ನಗರದಲ್ಲಿ ಅನಧಿಕೃತವಾಗಿ ಪ್ಲೆಕ್ಸ್ ಅಳವಡಿಸುವುದರ ಕುರಿತು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಮುಖಂಡ ವೈ.ಮಲ್ಲೇಶ್ ಮಾತನಾಡಿ, ಕಳೆದ ಮೂರು ದಶಕಗಳಿಂದ ಸಾರ್ವಜನಿಕ ವಿಜಯದಶಮಿ ಆಚರಣೆ ಮಹೋತ್ಸವ ಸಮಿತಿ ವತಿಯಿಂದ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಿಕೊಂಡು ಬರಲಾಗುತ್ತಿದೆ. ಇದುವರೆಗೂ ಯಾವುದೇ ಅಹಿತಕರಗಳು ಘಟನೆಗಳು ನಡೆದಿಲ್ಲ. ಮುಂದೆಯೂ ಕೂಡ ಇದೇ ರೀತಿ ಹಬ್ಬವನ್ನು ಶಾಂತಯುತವಾಗಿ ಆಚರಿಸಲಾಗುವುದು ಎಂದರು. ಇನ್ನೊರೋವ ಮುಖಂಡ ಯಾಸಿನ್.ಪಿ.ರಜ್ವಿ ಮಾತನಾಡಿ, ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ಈದ್‍ಮಿಲಾದ್ ಹಬ್ಬವನ್ನು ಆಚರಿಸಲಾಗುವುದು. ಹಬ್ಬದ ಸಂದರ್ಭದಲ್ಲಿ ಮೆರವಣಿಗೆ ನಡೆಯಲಿದ್ದು, ಸುಮಾರು 50 ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಯುತವಾಗಿ ಮೆರವಣಿಗೆಯನ್ನು ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಎಸ್‍ಪಿಎಸ್ ನಗರದ ಮಲ್ಲಪ್ಪ ಮಾತನಾಡಿ, ಎಲ್ಲಾ ಸಮುದಾಯದವರ ಸಹಕಾರದೊಂದಿಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಯುತವಾಗಿ ಹಬ್ಬಗಳನ್ನು ಆಚರಿಸಿ ಸಂಭ್ರಮಿಸೋಣ ಎಂದರು.

ಅಮಾನುಲ್ಲಾ ಖಾನ್ ಮಾತನಾಡಿ, ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಎಲ್ಲಾ ಕಾಲಕ್ಕೂ ಕಾಪಾಡಿಕೊಂಡು ಬರಲಾಗುತ್ತಿದೆ. ಹಬ್ಬಗಳ ಸಂದರ್ಭದಲ್ಲಿ ಹಿಂದೂ-ಮುಸ್ಲಿಮರು ಪರಸ್ಪರವಾಗಿ ಶುಭಾಶಯ ಕೋರುವ ಮೂಲಕ ಸಂತೋಷವಾಗಿ ಹಬ್ಬಗಳನ್ನು ಆಚರಿಸುತ್ತಿದ್ದೇವೆ ಎಂದರು.

ಇದೇ ವೇಳೆ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್, ಶಂಕರ್ ನಾರಾಯಣ್, ಸಾದಿಕ್ ಪೈಲ್ವಾನ್, ನಜೀರ್ ಅಹ್ಮದ್, ಗೌಡ್ರು ಚಂದ್ರಪ್ಪ, ಎ.ನಾಗರಾಜ್, ಟಿಪ್ಪು ಸಾಹೇಬ್,ಸೋಗಿ,  ಶಾಂತಕುಮಾರ್, ಆರ್.ಬಿ ರಂಗಪ್ಪ ಮಾತನಾಡಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಉಪವಿಭಾಗಾಧಿಕಾರಿಗಳಾದ ದುರ್ಗಾಶ್ರೀ ಹಾಗೂ ಹುಲ್ಲುಮನಿ ತಿಮ್ಮಣ್ಣ, ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೆÇಲೀಸ್ ಇಲಾಖೆಯ ಸಿಬ್ಬಂದಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!