ಯುವಜನತೆ ಕ್ರೀಡೆಯಿಂದ ನಾಯಕತ್ವ ಗುಣ ಬೆಳೆಸಿಕೊಳ್ಳಿ : ಜಿ.ಜಯರಾಮಯ್ಯ

1 Min Read

ಹಿರಿಯೂರು: ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ಸಮಾಜ ಸೇವಕ ಜಿ. ಜಯರಾಮಯ್ಯ ಅಭಿಪ್ರಾಯಪಟ್ಟರು.

ತಾಲೂಕಿನ ಆನೆಸಿದ್ರಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಯಧು ಕ್ರಿಕೆಟರ್ಸ್ ಏರ್ಪಡಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಟ್ರೋಫಿ ಪಂದ್ಯಾವಳಿಗೆ ಚಾಲನೆ ನೀಡಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಮಾತನಾಡಿದರು.

ಯುವ ಜನತೆ ಕ್ರೀಡ್ರೆಗಳ ಮಹತ್ವ ಅರಿತು, ಅಭಿವೃದ್ಧಿ ಪಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಹ ಮತ್ತು ಮನಸ್ಸು ಸದೃಢರಾಗಿರುತ್ತದೆ. ಕ್ರೀಡೆಯಿಂದ ಯುವಜನರಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಆದರೆ ಕ್ರೀಡೆಯಲ್ಲಿ ಪಾಲ್ಗೋಳ್ಳುವುದು ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಗೆಲುವು ಸ್ವೀಕರಿಸಿದಂತೆ ಸೋಲನ್ನು ಹಾಗೆಯೇ ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಡಾಬಾ ಚಿಕ್ಕಣ್ಣ, ಗ್ರಾಪಂ ಸದಸ್ಯ ಮಹಾಲಿಂಗಪ್ಪ, ತಿಪ್ಪಣ್ಣ, ರಾಮಣ್ಣ, ಚಿತ್ತಯ್ಯ, ಶಿವಣ್ಣ, ನಾಗಪ್ಪ, ಕಿಟ್ಟಿ ಸೇರಿದಂತೆ ಮತ್ತಿತರರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *