Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ​ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ‘ಯುವ ಸೇನೆ’ ಪಟ್ಟು: ಬರಗೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ!

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ಅಭಿವೃದ್ದಿಯ ಹರಿಕಾರ, ಮೂರನೆ ಬಾರಿಗೆ ಸತತವಾಗಿ ಗೆಲುವು ಸಾಧಿಸಿರುವ ಚಳ್ಳಕೆರೆ ಶಾಸಕ ಹ್ಯಾಟ್ರಿಕ್ ಹೀರೋ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ಟಿ.ರಘುಮೂರ್ತಿ ಯುವ ಸೇನೆಯಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಟಿ.ರಘುಮೂರ್ತಿರವರ ಫೋಟೋವನ್ನು ಬರಗೇರಮ್ಮನವರ ಪಾದದಲ್ಲಿರಿಸಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ರಘುಮೂರ್ತಿ ಯುವ ಸೇನೆ ರಾಜ್ಯಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಯಾಗಬೇಕಾದರೆ ಶಾಸಕ
ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲೇಬೇಕು. ಚಳ್ಳಕೆರೆಯಲ್ಲಿ ರಸ್ತೆ, ಶಿಕ್ಷಣ ಸಂಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಜನರಿಗೆ ತಲುಪಿಸಿ ರಾಜ್ಯದ ಗಮನ ಸೆಳೆದಿರುವ ಟಿ.ರಘುಮೂರ್ತಿರವರಿಗೆ ಅಭಿವೃದ್ದಿಯ ದೂರದೃಷ್ಟಿಯಿರುವುದರಿಂದ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ತಮ್ಮ ಸಚಿವ ಸಂಪುಟ ವಿಸ್ತರಣೆಯಲ್ಲಿ ಟಿ.ರಘುಮೂರ್ತಿಗೆ ಮಂತ್ರಿ ಸ್ಥಾನ ನೀಡಿ ಜಿಲ್ಲೆಯ ಜನರ ಆಶೋತ್ತರಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಕ್ಷೇತ್ರಾದ್ಯಂತ ಚಿರಪರಿಚಿತರಾಗಿರುವ ಶಾಸಕ ಟಿ.ರಘುಮೂರ್ತಿ ಎಲ್ಲಾ ಜಾತಿ ಜನಾಂಗದವರೊಡನೆ ಉತ್ತಮ ಬಾಂಧವ್ಯವಿಟ್ಟುಕೊಂಡಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ನೀಡದೆ ಕಡೆಗಣಿಸಿದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಕೆ.ಟಿ.ಶಿವಕುಮಾರ್ ಎಚ್ಚರಿಸಿದ್ದಾರೆ.
ವಿಶೇಷ ಪೂಜೆಯ ನಂತರ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
ಬರಗೇರಮ್ಮ ದೇವಸ್ಥಾನದ ಅರ್ಚಕ ಮಂಜಣ್ಣ, ವೀಣಗೌರಣ್ಣ, ಪಾಂಡು ಬಿಳಿಗಿರಿ, ಮುಜಾಯಿದ್, ರಾಕೇಶ್, ವಿಠಲ್, ಧನರಾಜ್, ಮಣಿಕಂಠ, ದರ್ಶನ್ ಬೆಳಗಟ್ಟ, ಶಿವು ಸೇರಿದಂತೆ ಟಿ.ರಘುಮೂರ್ತಿ ಯುವಸೇನೆ ಪದಾಧಿಕಾರಿಗಳು, ಕಾರ್ಯಕರ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now