Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪದವೀಧರರಿಗಾಗಿ ‘ಯುವಜಯ ಫಸ್ಟ್ ಜಾಬ್ 2026’ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳ ಕುರಿತು ಮಾಹಿತಿ, ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ರೋಟರಿ ಕ್ಲಬ್ ಚಿತ್ರದುರ್ಗ ಹಾಗೂ ಯುವಜಯ ಫೌಂಡೇಶನ್ ವತಿಯಿಂದ ‘ಯುವಜಯ ಫಸ್ಟ್ ಜಾಬ್ 2026’ ವೃತ್ತಿ ಮಾರ್ಗದರ್ಶನ ಹಾಗೂ ಕೌನ್ಸೆಲಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.

ಕಾರ್ಯಕ್ರಮವು ಅಕ್ಟೋಬರ್ 10, 2026ರಂದು ಚಿತ್ರದುರ್ಗದ ಡಿ.ಸಿ. ಸರ್ಕಲ್ ಬಳಿ ಇರುವ ರೋಟರಿ ಕ್ಲಬ್ ಚಿತ್ರದುರ್ಗ, ರೋಟರಿ ಬಾಲಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವು ಎರಡು ಅವಧಿಗಳಲ್ಲಿ ಆಕಾಂಕ್ಷಿಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು. ಅವಧಿ ಸಂಜೆ 3 ರಿಂದ 5 ಗಂಟೆಯವರೆಗೆ ನಡೆಯಲಿದೆ.

ಪದವೀಧರರು ಉದ್ಯೋಗ ಪಡೆಯಲು ಅಗತ್ಯವಿರುವ ವೃತ್ತಿ ಮಾರ್ಗದರ್ಶನ, ಉದ್ಯೋಗ ಕೌಶಲ್ಯ, ರೆಸ್ಯೂಮ್ ತಯಾರಿ, ಸಂದರ್ಶನ ಕೌಶಲ್ಯ, ಸಂವಹನ ಕೌಶಲ್ಯ, ಉದ್ಯೋಗಾವಕಾಶಗಳ ಕುರಿತು ಮಾಹಿತಿ ಹಾಗೂ ಪ್ಲೇಸ್‌ಮೆಂಟ್‌ಗೆ ಅಗತ್ಯವಾದ ಮಾರ್ಗದರ್ಶನವನ್ನು ಕಾರ್ಯಕ್ರಮದಲ್ಲಿ ನೀಡಲಾಗುತ್ತದೆ.

ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಆಯೋಜಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ:
📞 +91 8892600667
📞 +91 8105476196

ಸ್ಥಳ: ರೋಟರಿ ಕ್ಲಬ್ ಚಿತ್ರದುರ್ಗ, ರೋಟರಿ ಬಾಲಭವನ,ಡಿ.ಸಿ. ಸರ್ಕಲ್, ಚಿತ್ರದುರ್ಗ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now