Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಜಿ.ಪಂ ಸಿಇಒ ಭೇಟಿ, ಪರಿಶೀಲನೆ

---Advertisement---

 

 

ಚಿತ್ರದುರ್ಗ. ಜುಲೈ 09:  ಪ್ರಸಕ್ತ ಸಾಲಿನಲ್ಲಿ ನರೇಗಾ ಜಾಬ್‍ಕಾರ್ಡ್ ಹೊಂದಿರುವ ಅರ್ಹ ಬಡ ಕುಟುಂಬಗಳಿಗೆ ಉದ್ಯೋಗ ನೀಡಲು ಸೂಚಿಸಿದ ಅವರು, ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದರು.

ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಅವರಿಂದ ಮಾಹಿತಿ ಪಡೆದ ಜಿ.ಪಂ ಸಿಇಒ, ನರೇಗಾ ಜಾಬ್‍ಕಾರ್ಡ್ ಹೊಂದಿರುವ ಅರ್ಹ ಬಡ ಕುಟುಂಬಗಳಿಗೆ ಉದ್ಯೋಗ ಒದಗಿಸಿ, ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಗ್ರಾಮಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದರು.

ನಂತರ ಮಾಡನಾಯಕನಹಳ್ಳಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರೊಂದಿಗೆ ಗ್ರಾಮಗಳ ಅಭಿವೃದ್ಧಿ ಬಗ್ಗೆ ಸಂವಾದ ನಡೆಸಿದರು. ಬಹುಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆಗಳೇನಾದರೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದೆಯಾ ಎಂದು ಜಿ.ಪಂ ಸಿಇಒ ಕೇಳಿದಾಗ, ಸಾರ್ವಜನಿಕರು ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ಗ್ರಂಥಾಲಯ, ಅಂಗನವಾಡಿ ಕೇಂದ್ರ, ಕರವಸೂಲಾತಿ ಮತ್ತು 15ನೇ ಹಣಕಾಸು ಆಯೋಗ ಬಗ್ಗೆ, ಮಾಹಿತಿ ಪಡೆದು, ಇ-ಸ್ವತ್ತುಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ವಿತರಿಸುವಂತೆ ಸಿಇಒ ಸೂಚಿಸಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಸಹಾಯಕ ನಿರ್ದೇಶಕ (ನರೇಗಾ) ಯರ್ರಿಸ್ವಾಮಿ, ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment