Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈನುಲ್ಲಾಬ್ದಿನ್ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ, (ಏ.09): ಆಜಾದ್ ಫ್ಲೋರ್‍ಮಿಲ್ ಹಾಗೂ ವೇದಾ ಫೀಡ್ಸ್ ನ ಮುಖ್ಯಸ್ಥರಾಗಿದ್ದ ಜೈನುಲ್ಲಾಬ್ದಿನ್(89) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಗಿನ ಜಾವ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅನೇಕ ದಿನಗಳಿಂದ ಚಿಕಿತ್ಸೆಯಲ್ಲಿದ್ದರು.

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಇಲಾಹಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ-ಕಾರ್ಯದರ್ಶಿಯಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ಬಹಳಷ್ಟು ಹಿರಿಯರ ಒಡನಾಟವಿಟ್ಟುಕೊಂಡಿದ್ದರು.

ಮೃತರು ಪತ್ನಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಸೇರಿದಂತೆ ಆರು ಮಂದಿ ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಚೇಳುಗುಡ್ಡದ ಟಿ.ಎಂ.ಕೆ.ಪೀರ್‍ಸಾಬ್ ಕಾಂಪೌಂಡ್‍ನಲ್ಲಿರುವ ಖಬರಸ್ಥಾನಲ್ಲಿ ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಅಂತಿಮ ದರ್ಶನ : ಮಾಜಿ ಸಚಿವ ಹೆಚ್.ಏಕಾಂತಪ್ಪ, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಎ.ಉಮಾಪತಿ, ಎಸ್.ಕೆ.ಬಸವರಾಜನ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರಪಪ್ಪಿ, ರಘು ಆಚಾರ್, ಭೀಮುಸಮುದ್ರದ ಜಿ.ಎಸ್.ಮಂಜುನಾಥ್, ಮುರುಘಾಮಠದ ಬಸವಪ್ರಭುಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಎಸ್.ಡಿ.ಪಿ.ಐ.ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್, ಜಿಲ್ಲಾ ವಕ್ಫ್‍ಬೋರ್ಡ್ ಚೇರ್ಮನ್ ಎಂ.ಸಿ.ಓ.ಬಾಬು, ಮರ್ಚೆಂಟ್ಸ್ ಸೌಹಾರ್ಧ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ, ವೀರಶೈವ ಸಮಾಜದ ಕೆ.ವಿ.ಪ್ರಭಾಕರ್, ಹಿರಿಯ ಉದ್ಯಮಿ ಚಳ್ಳಕೆರೆಯ ಟಿ.ಎ.ಟಿ.ಪ್ರಭುದೇವ್, ನಗರಸಭೆ ಹಾಲಿ ಹಾಗೂ ಮಾಜಿ ಸದಸ್ಯರುಗಳು ಮೃತರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!