ಚಳ್ಳಕೆರೆ, (ಜನವರಿ.04) : ನಗರದ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿ ನಿಲಯ ಆವರಣ ಸ್ವಚ್ಛತೆ, ದಾಸ್ತಾನು ಕೊಠಡಿ, ಕಂಪ್ಯೂಟರ್ ಮತ್ತು ಗ್ರಂಥಾಲಯ ಕೊಠಡಿ ವೀಕ್ಷಿಸಿದರು.
ನಂತರ ವಿದ್ಯಾರ್ಥಿನಿಯರೊಂದಿಗೆ ಮಧ್ಯಾಹ್ನದ ಊಟ ಸೇವಿಸಿ, ವಿದ್ಯಾರ್ಥಿನಿಯರು ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. 15 ರಿಂದ 18 ವರ್ಷದ ಮಕ್ಕಳು ಕೋವಿಡ್ ಲಸಿಕೆ ಪಡೆಯಬೇಕು ಎಂದರು.
ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು, ಉತ್ತಮ ಅಂಕಗಳನ್ನು ಪಡೆಯಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗ್ರೇಡ್-1 ಡಿ.ಚಿದಾನಂದಪ್ಪ ಹಾಗೂ ನಿಲಯಪಾಲಕರಾದ ವಿದ್ಯಾರಾಣಿ, ಅಲಿಜಾನ್ ಇದ್ದರು.